ಕೃಷಿ ಸಂಕಷ್ಟ ನಿವಾರಣೆಗೆ ವೃಕ್ಷ ಪ್ರೀತಿ ಬೆಳೆಯಬೇಕು, ಪರಿಸರದಲ್ಲಿ ದೇವರನ್ನು ಕಾಣುವ ಮನೋಧರ್ಮ ಬಂದಾಗ ತಂತಾನೆ ಪ್ರಾಕೃತಿಕ ಸಂಪತ್ತು ಬೆಳೆಯಲು ಸಾಧ್ಯ ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಸಾಂಪ್ರದಾಯಿಕ ಬೆಳೆಯ ಜೊತೆಗೆ ವಾಣಿಜ್ಯ ಬೆಳೆಗಳನ್ನು ಬೆಳೆಯುವ ಭರಾಟೆಯಲ್ಲಿ ಪ್ರಾಕೃತಿಕ ಸಂಪತ್ತಿಗೆ ಧಕ್ಕೆ ತರುತ್ತಿದ್ದಾರೆ, ಆಧುನಿಕ ಬೇಸಾಯ ಪದ್ದತಿಗಳಿಂದ ನಷ್ಟ ಅನುಭವಿಸುತ್ತಿದ್ದಾರೆ, ಇಂದಿನ ಸಂಧರ್ಬದಲ್ಲಿ ಜಮೀನು-ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯೂ ಇದೆ ಹೀಗಿರುವಾಗ ಮರ-ಗಿಡ ನೆಟ್ಟು ಪೋಷಿಸುವುದರಿಂದ ಅವು ನಮ್ಮ ಕಷ್ಟಕಾಲದಲ್ಲಿ ನೆರವಿಗೆ ಬರುತ್ತವೆ ಆದ್ದರಿಂದ ಪ್ರತಿಯೊಬ್ಬರು ತಮ್ಮ ಜಮೀನುಗಳಲ್ಲಿ, ಖಾಲಿ ಸ್ಥಳಗಳಲ್ಲಿ ಗಿಡಬೆಳೆಸಿ ಹಸಿರು ವಾತಾವರಣವನ್ನು ಉಳಿಸಿ ಕೃಷಿ ಜಮೀನಿಗೆ ಸತ್ವಯುತ ಪೋಷಕಾಂಶಗಳು ಲಭಿಸಬೇಕೆಂದರೆ ಗಿಡ ನೆಡುವುದೊಂದೇ ಏಕೈಕ ಪರಿಹಾರವಾಗಿದೆ ಗಿಡಬೆಳೆಸಲು ಆಯಾ ಊರಿನ ಗ್ರಾಮಸ್ಥರು ಪ್ರತೀ ವರ್ಷ ಹೊಸದಾಗಿ ಗಿಡಖರೀದಿಸಿ ಅವರವರ ಗ್ರಾಮಗಳಲ್ಲಿ ಗಿಡನೆಡಿಸುವ ಸಂಪ್ರದಾಯವನ್ನು ಎಲ್ಲಾ ಗ್ರಾಮಗಳ ಗ್ರಾಮಸ್ಥರುಗಳು ಅನುಕರಿಸಬೇಕು. ಮರಗಳು ಆಪತ್ತಿನ ಸ್ನೇಹಿತರಿದ್ದಂತೆ ವಾಣಿಜ್ಯ ಬೆಳೆಬೆಳೆದು ಮಣ್ಣಿನ ಫಲವತ್ತತೆ ಹಾಳು ಮಾಡುವ ಮತ್ತು ನೇಣಿಗೆ ಶರಣಾಗುವ ಬದಲಿಗೆ ರೈತರು ಜಮೀನುಗಳಲ್ಲಿ ಗಿಡ ನೆಟ್ಟು ಪೋಷಿಸಿ ಅವು ನಮ್ಮನ್ನು ಜೀವನ ಪರ್ಯಂತ ಕಾಯುತ್ತವೆ, ನಮ್ಮ ರೈತರು ಅರ್ಥ ಮಾಡಿಕೊಳ್ಳಬೇಕು, ಪ್ರಾಕೃತಿಕ ಅಸಮತೋಲನ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗಿಡ ಬೆಳೆಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ